ಶಾಸಕ ಯತ್ನಾಳ್ ಅವರ ಹೊಸ ಪಕ್ಷಕ್ಕೆ ಶುಭವಾಗಲಿ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ, ಮಾರ್ಚ್‌ 31,2025 (www.justkannada.in): ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದಾರೆ, ಈ ಕುರಿತು  ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಯತ್ನಾಳ್ ಅವರ ಹೊಸ ಪಕ್ಷಕ್ಕೆ ಶುಭವಾಗಲಿ ಎಂದು ಶುಭ ಹಾರೈಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್ ಅವರು ಹೇಳಿದಂತೆ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಯಾವುದೇ ಒಳ ಒಪ್ಪಂದವಿಲ್ಲ. ಅವರು ನಾಲಿಗೆಗೂ ಮೆದುಳಿಗೂ ಸಂಬಂಧವಿಲ್ಲದಂತೆ ಮಾತನಾಡುತ್ತಾರೆ. ಯತ್ನಾಳ್ ಅವರು ಕಟ್ಟಲು ಮುಂದಾಗಿರುವ ಹೊಸ ಪಕ್ಷಕ್ಕೆ ಶುಭವಾಗಲಿ ಎಂದರು.

ಹಾಲಿನ ದರ 4 ರೂ ಹೆಚ್ಚಳವಾಗಿರುವ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹಾಲಿನ ದರ ಏರಿಕೆಯಿಂದಾಗಿ ರೈತರಿಗೆ ಅನುಕೂಲವಾಗಲಿದೆ. ಏರಿಕೆಯಾಗಿರುವ ನಾಲ್ಕು ರೂಪಾಯಿ ನೇರವಾಗಿ ರೈತರಿಗೆ ಸೇರಲಿದೆ ಎಂದರು.

Key words: Good luck, MLA, Yatnal,  new party, Minister, Lakshmi Hebbalkar