ಶೀಘ್ರದಲ್ಲೇ ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಜಮೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ,ಏಪ್ರಿಲ್,1,2025 (www.justkannada.in): ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ  ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಫೆಬ್ರವರಿ ತಿಂಗಳ ಹಣ ಶೀಘ್ರದಲ್ಲೇ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ಜನವರಿ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಬಂದಿದೆ. ಮೊನ್ನೆ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಿದೆ ಹಣಕಾಸು ಇಲಾಖೆಯಿಂದ  2500ಕೋಟಿ ಕ್ಲಿಯರ್ ಆಗಿದೆ.  ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ಹಣವೂ ಬರಲಿದೆ ಎಂದರು.

ಹಾಲಿನ ದರ ಏರಿಕೆ ಮಾಡಿರುವುದರಿಂದ ರೈತರಿಗೆ ಅನುಕೂಲ ಆಗಿದೆ. ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು.

Key words: Grihalakshmi Yojana, money, deposite, Minister, Lakshmi Hebbalkar