ಕಾನೂನಿನ ಪ್ರಕಾರವೇ ಜಿಂದಾಲ್ ಗೆ ಜಮೀನು- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,23,2024 (www.justkannada.in): ಜಿಂದಾಲ್ ಉಕ್ಕು ಕಂಪನಿಗೆ ಕೋರ್ಟ್ ನಿರ್ದೇಶನ ಮತ್ತು ಅದನ್ನು ಅನುಸರಿಸಿ ಹೊರಡಿಸಿದ ಸರಕಾರಿ ಆದೇಶ ಹಾಗೂ ಸಂಪುಟ ಸಭೆಯ ನಿರ್ಣಯದಂತೆಯೇ ಕಾನೂನಿಗೆ ಅನುಸಾರವಾಗಿ 3,677 ಎಕರೆ ಭೂಮಿಯನ್ನು ಗುತ್ತಿಗೆ ಮಾರಾಟ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಸರಕಾರದ್ದು ಎಳ್ಳಷ್ಟೂ ತಪ್ಪಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌. ಬಿ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಖಾನೆ ಹೊಂದಿರುವ ಜಿಂದಾಲ್ ಕಂಪನಿಗೆ ನಾವೇನೂ ರಿಯಾಯಿತಿ ಕೊಟ್ಟಿಲ್ಲ. ಮಾರುಕಟ್ಟೆ ಬೆಲೆ ಹಿಂದೆ ಏನಿದೆಯೋ ಅದನ್ನು ನಿಗದಿಪಡಿಸಿದ್ದೇವೆ. ಕಂಪನಿ ಕೂಡ ಸರಕಾರದ ಷರತ್ತುಗಳನ್ನು ಪಾಲಿಸಿದೆ. ರಾಜ್ಯದಲ್ಲಿ ಇರುವ ಒಂದು ಲಕ್ಷ ಕೈಗಾರಿಕೆಗಳಿಗೆ ಯಾವ ನಿಯಮ ಹೇಳಿದ್ದೇವೋ ಅದನ್ನೇ ಜಿಂದಾಲ್ ಗೂ ಅನ್ವಯಿಸಲಾಗಿದೆ. ವಾಸ್ತವವಾಗಿ ಒಂಬತ್ತು ವರ್ಷಗಳ‌ ಕಾಲ ಇದನ್ನು ವೃಥಾ ಎಳೆದಾಡಿದ್ದೇವೆ’ ಎಂದಿದ್ದಾರೆ.

ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಜಿಂದಾಲ್ ರಾಜ್ಯದಲ್ಲಿ 90 ಸಾವಿರ ಕೋಟಿ ರೂಪಾಯಿ ಹೂಡಿದ್ದು, 50 ಸಾವಿರ ಉದ್ಯೋಗ ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಸರಕಾರದ ಕಡೆಯಿಂದ ಹೂಡಿಕೆದಾರರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಅವರು ಪ್ರತಿಪಾದಿಸಿದ್ದಾರೆ.

ಸರಕಾರವು ಉದ್ಯಮಿಗಳಿಗೆ ಜಮೀನು ಕೊಡುತ್ತದೆ. ಅದರಲ್ಲಿ ಹತ್ತು ವರ್ಷಗಳಲ್ಲಿ ಶೇ 51ರಷ್ಟು ಭೂಮಿಯನ್ನು ಅವರು ಬಳಸಿಕೊಂಡು, ಕಂಪನಿಯನ್ನು ಸಕ್ರಿಯವಾಗಿ ಇಟ್ಟಿರಬೇಕು. ಆಗ ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗುತ್ತದೆ. ಇದರಲ್ಲಿ ಜಿಂದಾಲ್ ಎಲ್ಲೂ ಎಡವಿಲ್ಲ ಎಂದು ಅವರು ನುಡಿದರು.

ನಾವು ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿಂದ ಕೈಗಾರಿಕಾ ಕ್ಷೇತ್ರದಲ್ಲಿ ಭಾರೀ ಪೈಪೋಟಿ ಎದುರಿಸುತ್ತಿದ್ದೇವೆ. ಎಷ್ಟೋ ರಾಜ್ಯಗಳು ಉದ್ದಿಮೆಗಳಿಗೆ ಉಚಿತವಾಗಿ ಭೂಮಿ ಕೊಡುತ್ತಿವೆ. ಹಿಂದೆ ಜಿಂದಾಲ್ ಕಂಪನಿಗೆ ಭೂಮಿಯನ್ನು ಲೀಸ್ ಕಂ ಸೇಲ್ ಮಾಡಲು ಕೆಲವರು ಯಾಕೆ ವಿರೋಧಿಸಿದರೋ ಗೊತ್ತಿಲ್ಲ ಎಂದು ಅವರು ವಿವರಿಸಿದ್ದಾರೆ.

ಹಿಂದೆ ನಾವು ಜಿಂದಾಲ್ ವಿರುದ್ಧವೇನೂ ಪ್ರತಿಭಟಿಸಿಲ್ಲ. ಆಗ ನಾವು ಜನಾರ್ದನ ರೆಡ್ಡಿ ವಿರುದ್ಧವಷ್ಟೇ ದನಿ ಎತ್ತಿದ್ದೆವು. ಜತೆಗೆ ಈಗ ಜಿಂದಾಲ್ ಗೆ ಕೊಡುತ್ತಿರುವ ಭೂಮಿಯಲ್ಲಿ ಗಣಿಗಾರಿಕೆಯೇನೂ ನಡೆಯುತ್ತಿರಲಿಲ್ಲ ಎಂದು ಪಾಟೀ;ಲ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ

ಮುಡಾ ಹಗರಣದ ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ ಎಂದು ಎಂ‌.ಬಿ ಪಾಟೀಲ್ ಹೇಳಿದ್ದಾರೆ.

ಮುಡಾ ಹಗರಣದ ನೆಪದಲ್ಲಿ ಸರಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನೋಡುತ್ತಿವೆ. ಆದರೆ ಅವರು ತಲೆ ಕೆಳಗೆ ಮಾಡಿಕೊಂಡು ನಿಂತರೂ ಅದು ಸಾಧ್ಯವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರದಲ್ಲಿ ಕೆಲವು ಸಲಹೆ ಸೂಚನೆ ನೀಡಲಿದೆ ಎಂದು ಅವರು ನುಡಿದಿದ್ದಾರೆ.

ಟಿ.ಜೆ ಅಬ್ರಹಾಂ ನೀಡಿದ ದೂರಿನ ಮೇರೆಗೆ ತರಾತುರಿಯಲ್ಲಿ ಕ್ರಮ ಕೈಗೊಂಡ ರಾಜ್ಯಪಾಲರು, ಶಶಿಕಲಾ‌ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಎಚ್ ಡಿ ಕುಮಾರಸ್ವಾಮಿ ವಿಚಾರದಲ್ಲಿ ವರ್ಷಗಳೇ ಉರುಳಿದರೂ ಏಕೆ ಸುಮ್ಮನಿದ್ದಾರೆ ಎಂದು ಅವರು ಪ್ರಶ್ನಿಸಿದರು.

ENGLISH SUMMARY

Land to Jindal as per Law: MB Patil

Bengaluru: Large and Medium Industries Minister MB Patil strongly defended the government’s decision to execute lease cum sale deed of 3,677 acres of land to Jindal Steel Company, asserting that the transaction was in full compliance with the law. Speaking on Friday, he emphasised that the sale followed a government order issued after a court directive and a subsequent cabinet resolution, leaving no room for any wrongdoing.

Addressing the press, Patil clarified, “We have not provided any concessions to Jindal. The company paid the market price, and all government regulations were strictly followed. The same rules that apply to over one lakh industries in the state have been applied in Jindal’s case as well.” He added that the issue had been unnecessarily dragged on for nearly nine years.

Looking ahead, Patil mentioned that a global investor conference would be held in Bengaluru in six months. He highlighted that Jindal has invested ₹90,000 crore in the state and created 50,000 jobs. “In such a scenario, it is crucial that no wrong message is sent to potential investors by the government,” he asserted.

Patil further explained that, as per the industrial policy, entrepreneurs provided land by the government are required to utilise at least 51% of it within ten years while keeping their operations running. The sale contract is then executed as per policy, and Jindal has fully complied with these requirements.

“We face stiff competition in the industrial sector from Tamil Nadu, Maharashtra, Gujarat, Andhra Pradesh, and Telangana. Many states are offering free land to industries,” Patil stated. He also expressed confusion over why some people in the past opposed the lease-cum-sale of land to Jindal.

Patil clarified that there had been no protests against Jindal by the Congress in the past, noting that earlier objections were raised only against Janardhana Reddy. In response to a query, he confirmed that no mining activities were taking place on the land that has been decided for sale to Jindal.

Key words: Land, Jindal,  law , Minister, MB Patil