ಬೆಂಗಳೂರು,ಸೆಪ್ಟಂಬರ್,22,2020(www.justkannada.in): ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತ ವಿರೋಧಿ ಕಾಯ್ದೆಗಳನ್ನು ಕೈ ಬಿಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ.
ಭೂಸುಧಾರಣಾ ಕಾಯ್ದೆ ತಿದ್ಧುಪಡಿ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಜಾರಿಗೆ ವಿರೋಧಿಸಿ ರೈತಪರ ಸಂಘಟನೆಗಳು ನಿನ್ನೆ ಬೆಂಗಳೂರಿನ ಮೆಜೆಸ್ಟಿಕ್ ನಿಂದ ಫ್ರೀಡಂಪಾರ್ಕ್ ವರೆಗೆ ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ರೈತವಿರೋಧಿ ಬಿಲ್ ವಿರೋಧಿಸಿ ರೈತಮುಖಂಡರು ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಇದೀಗ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ.
ಈ ನಡುವೆ ಫ್ರೀಡಂಪಾರ್ಕ್ ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು ಪ್ರತಿಭಟನಾ ಸ್ಥಳಕ್ಕೆ ಸಚಿವ ಶಿವರಾಂ ಹೆಬ್ಬಾರ್ ಭೇಟಿ ನೀಡಿದ್ದರು. ಈ ವೇಳೆ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಪ್ರತಿಭಟನಾಕಾರರು ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
Key words: Land Reform Act Amendment- Protest- Bangalore-farmer- continued