ಬೆಂಗಳೂರು, ಮೇ 06, 2020 (www.justkannada.in): ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳು ಲಾಕ್ ಡೌನ್ ನಿಂದಾಗಿ ತೊಂದರೆಗೆ ಸಿಲುಕಿದ್ದು, ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, 2 ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುವುದಾಗಿ ಸಿಎಂ ಪ್ರಕಟಿಸಿದ್ದಾರೆ.
ಬೃಹತ್ ಕೈಗಾರಿಕೆಗಳಿಗೆ 2 ತಿಂಗಳು ವಿದ್ಯುತ್ ಬಿಲ್ ಕಟ್ಟದಿದ್ದರೆ ಬಡ್ಡಿ ಇಲ್ಲ. ಅವರಿಗೆ ಯಾವುದೇ ದಂಡ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಗ್ರಾಹಕರು ವಿದ್ಯುತ್ ಬಿಲ್ ನ್ನು ಸರಿಯಾದ ಸಮಯಕ್ಕೆ ಪಾವತಿಸಿದರೆ, ಅಂತಹವರಿಗೆ ಒಟ್ಟು ಬಿಲ್ ಮೊತ್ತದ ಶೇ.1ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.
ಇದರೊಂದಿಗೆ ವಿದ್ಯುತ್ ಬಿಲ್ ನ್ನು ಮುಂಗಡವಾಗಿ ಪಾವತಿಸುವ ಗ್ರಾಹಕರಿಗೂ ರಿಯಾಯಿತಿ ನೀಡಲಾಗುವುದು. ಲಾಕ್ ಡೌನ್ ನಿಂದ ಎಲ್ಲ ವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದ ಕಾರಣ, ಕಳೆದ 2 ದಿನಗಳಿಂದ ಕೊಂಚ ಸಡಿಲಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಿಯಮ ಪಾಲಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದ್ದಾರೆ.