ಮಂಗಳೂರು,ಅಕ್ಟೋಬರ್,19,2021(www.justkannada.in): ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿ ನಗರದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿ ವಕೀಲ ರಾಜೇಶ್ ಭಟ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಈ ಮಧ್ಯೆ ರಾಜೇಶ್ ಭಟ್ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಸಂತ್ರಸ್ತ ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ರಾಜೇಶ್ ಭಟ್ ಮಂಗಳೂರಿನಲ್ಲಿ ಒಳ್ಳೆಯ ಹೆಸರು ಗಳಿಸಿದ್ದರು. ಎರಡು ದಿನಗಳ ಹಿಂದೆ ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು, ಎನ್ನಲಾದ ಫೋನ್ ಕರೆಯ ಆಡಿಯೋ ಹರಿದಾಡಿತ್ತು. ಆಕೆಯನ್ನು ಕಚೇರಿಗೆ ಬರುವಂತೆ ಮತ್ತು ಮುಂದೆಂದೂ ಈ ರೀತಿ ನಡೆದುಕೊಳ್ಳುವುದಿಲ್ಲ. ಇಲ್ಲಿಗೇ ಬಿಟ್ಟು ಬಿಡು ಎಂದು ವಕೀಲ ರಾಜೇಶ್ ಭಟ್ ಹೇಳಿದ್ದಾರೆನ್ನಲಾದ ಆಡಿಯೋ ವೈರಲ್ ಆಗಿದೆ.
ಪ್ರಕರಣ ಕುರಿತು ಮಾತನಾಡಿರುವ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ದೂರು ನೀಡಿದ್ದಾರೆ. ನಿನ್ನೆ ರಾತ್ರಿ ಸಂತ್ರಸ್ತೆ ದೂರು ನೀಡಿದ್ದಾರೆ. ಈ ಕುರಿತು ಎರಡು ಪ್ರಕರಣ ದಾಖಲಿಸಲಾಗಿದೆ. ಲೈಂಗಿಕ ಕಿರುಕುಳ ಪ್ರಕರಣ ಮತ್ತು ಸಂತ್ರಸ್ತೆಗೆ ಸಹಾಯ ಮಾಡುವುದಾಗಿ ಹೇಳಿ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸಮಗ್ರ ತನಿಖೆ ಬಳಿಕ ಕೋರ್ಟ್ ಗೆ ವರದಿ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಕೀಲ ರಾಜೇಶ್ ಭಟ್ ಕಚೇರಿಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಆದರೆ ಕಚೇರಿಯಲ್ಲಿ ಬೀಗ ಹಾಕಿದ ಹಿನ್ನೆಲೆ ವಾಪಸ್ ಆಗಿದ್ದಾರೆ ಎನ್ನಲಾಗಿದೆ.
Key words: Law student -accused -sexual harassment-lawyer
ENGLISH SUMMARY….
Sexual harassment charges against Mangaluru’s top advocate Rajesh Bhat: Case filed
Mangaluru, October 19, 2021 (www.justkannada.in): A law student in Mangaluru has filed a case at the Women’s Police station in Pandeshwara, Mangaluru, against renowned advocate Rajesh Bhat, alleging him of sexually harassing her.
It is said that the girl who is a law student joined advocate K.S.N. Rajesh’s office as an internee. In her complaint, the girl has alleged that Rajesh Bhat called her inside his cabin and behaved indecently and sexually harassed her.
Rajesh Bhat is a renowned advocate in Mangaluru. An audio clipping said to have taken place between the advocate, and the student had gone viral in the city about two days ago. In the audio clipping, the advocate has requested the girl to come to the office and confesses that the incident won’t repeat in the future. The advocate is said to have pleaded with the girl, “Please forget it.”
Speaking about the case, Mangaluru Police Commissioner Shashikumar has informed that the student has filed a sexual harassment complaint against the advocate, and a case is already registered. “We are investigating the case, and we will submit a detailed report to the Hon’ble court after completing the investigation,” he informed.
It is also said that the Police Commissioner visited the office of the advocate Rajesh Bhat, but had to return as the office was locked.
Keywords: Mangaluru/ noted advocate/ Rajesh Bhat/ sexual harassment/ case