ಮೈಸೂರು,ನವೆಂಬರ್,8,2023(www.justkannada.in): ನಾನು ಬಿಜೆಪಿ ಪಕ್ಷ ಬಿಟ್ಟು ಹೋಗಲ್ಲ. ನಾನು ಮಾನಸಿಕವಾಗಿ ದೈಹಿಕವಾಗಿ ನಾನು ಪಕ್ಷದಲ್ಲೆ ಇದ್ದೇನೆ. ಕಾಂಗ್ರೆಸ್ ಸೇರುತ್ತಾರೆ ಎಂಬುದ್ದೆಲ್ಲಾ ಊಹಾಪೋಹಗಳು ಎಂದು ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ನಾನು ಯಡಿಯೂರಪ್ಪ ಮಾತು ನಂಬಿ ಬಿಜೆಪಿಯಲ್ಲಿದ್ದೇನೆ. ಆದರೆ ಇವರೆ ಪಕ್ಷದಿಂದ ಓಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೆ ನನ್ನ ವಿರುದ್ಧ ಕೆಲಸ ಮಾಡಿದ್ರು. ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ,ಆದ್ರೆ ಪ್ರಯೋಜನವಾಗಲಿಲ್ಲ. ಅವರ ಹುಟ್ಟಹಬ್ಬವನ್ನೆ ಕ್ಷೇತ್ರದಲ್ಲಿ ಅದ್ದೂರಿಯಾಗಿ ಮಾಡಿದರು ಇದೆಲ್ಲ ಏನ್ ಅರ್ಥ. ಬಸವರಾಜ್ ಬೊಮ್ಮಯಿ ಅವರು ಮುಖ್ಯಮಂತ್ರಿಯಾದಾಗ ನನ್ನನ್ನು ಯಡಿಯೂರಪ್ಪ ಉಳಿಸಿಕೊಂಡರು. ಯಡಿಯೂರಪ್ಪನವರ ವಿರುದ್ಧ ಐದಾರು ಜನರು ಮಾತನಾಡಿದರು. ಅವರ ವಿರುದ್ಧ ಪಕ್ಷದಲ್ಲಿ ಕ್ರಮ ತೆಗೆದುಕೊಳ್ಳಲಿಲ್ಲ. ಇದು ಕೂಡ ಪಕ್ಷದ ಹಿನ್ನೆಡೆಗೆ ಕಾರಣ ಎನ್ನುವ ಮೂಲಕ ಯಡಿಯೂರಪ್ಪರನ್ನ ಪಕ್ಷದಲ್ಲಿ ಮೂಲೆಗುಂಪು ಮಾಡಿರುವುದಕ್ಕೆ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ. ಈಶ್ವರಪ್ಪಗೆ ಯಾವುದೇ ಬೆಲೆ ಇಲ್ಲ. ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನನ್ನು ಪಕ್ಷದಿಂದ ಬಿಟ್ಟುಹೋಗು ಅಂತ ಹೇಳಲು ಈಶ್ವರಪ್ಪ ಯಾರು. ಈಶ್ವರಪ್ಪ ಏನು ರಾಜ್ಯಧ್ಯಕ್ಷನಾ. ಈಶ್ವರಪ್ಪ ನಂಬಿ ಪಕ್ಷಕ್ಕೆ ಬರಲಿಲ್ಲ. ನಾನು ಯಡಿಯೂರಪ್ಪ ನಂಬಿ ಪಕ್ಷಕ್ಕೆ ಬಂದಿದ್ದೇನೆ. ಇದೆಲ್ಲಾ ಬೆಳವಣಿಗೆಯಾದ ಮೇಲೆ ನಾನು ಯಡಿಯೂರಪ್ಪ ಜೊತೆ ಮಾತನಾಡಿದ್ದೇನೆ. ಅವರು ಯಾವುದೇ ಕಾರಣಕ್ಕೆ ಪಕ್ಷ ಬಿಡಬೇಡ ಎಂದು ಹೇಳಿದ್ದಾರೆ. ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷದಲ್ಲಿದ್ದೇನೆ. ಈಗ ಯಾರೋ 5 ಜನರು ಮಾತನಾಡುತ್ತಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಎಸ್.ಟಿ.ಸೋಮಶೇಖರ್ ಬೆಂಬಲಿಗರು ಮಾತ್ರ ಪಕ್ಷ ಬಿಟ್ಟಿಲ್ಲ. ಅಶೋಕ್ ಕ್ಷೇತ್ರದಲ್ಲಿ ಹೋಗಿಲ್ಲವಾ? ಮುನಿರತ್ನ ಕ್ಷೇತ್ರದಲ್ಲಿ ಹೋಗಿಲ್ಲವಾ? ದಾಸರಹಳ್ಳಿ, ಕೆ.ಆರ್.ಪುರಂ ಕ್ಷೇತ್ರದಲ್ಲಿ ಹೋಗಿಲ್ಲವಾ…? ಕೇವಲ ನನ್ನನ್ನೆ ಏಕೆ ಟಾರ್ಗೆಟ್ ಮಾಡುತ್ತಿರಾ? ಕ್ಷೇತ್ರದಲ್ಲಿ ಸಾವಿರ ಜನ ಲೀಡರ್ ಇರುತ್ತಾರೆ. ಚುನಾವಣೆ ಸಂದರ್ಭದಲ್ಲಿ ಆ ಕಡೆ ಈ ಕಡೆ ಹೋಗುತ್ತಾರೆ. ಇದಕ್ಕೆ ಮಹತ್ವ ಬೇಡ ಎಂದರು.
Key words: Leaving- BJP – joining- Congress-issue-MLA -ST Somashekhar