ಮೈಸೂರು,ಸೆಪ್ಟಂಬರ್,11,2021(www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹಗರನಹಳ್ಳಿ ಮಂಟಿಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಹಲವು ದಿನಗಳಿಂದ ಕಾಡಿನಿಂದ ನಾಡಿಗೆ ಬರುತ್ತಿದ್ದ ಚಿರತೆ 20 ದಿನಗಳ ಹಿಂದೆ ರೈತ ಸೋಮಯ್ಯ ಅವರ ಮೂರು ಮೇಕೆಗಳನ್ನು ಕೊಂದಿತ್ತು. ಈ ಹಿನ್ನೆಲೆಯಲ್ಲಿ ಈ ಕುರಿತು ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ನಂತರ ಗ್ರಾಮದ ಲಕ್ಕಯ್ಯ ಚೆಲುವಯ್ಯ ಜಮೀನಿನಲ್ಲಿ ಬೋನು ಇಡಲಾಗಿತ್ತು.
ಇದೀಗ ಬೋನಿಗೆ ಚಿರತೆ ಬಿದ್ದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Key words: leopard –forest Department-mysore- farmer- farm.