ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ.

ಮೈಸೂರು,ಡಿಸೆಂಬರ್,31,2024 (www.justkannada.in): ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ ನಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದ್ದು,  ಕ್ಯಾಂಪಸ್ ಸುತ್ತಮುತ್ತ ಭಯದ ವಾತಾವರಣ ನಿರ್ಮಾಣವಾಗಿದೆ.

ವಿಷಯ ಗೊತ್ತಾಗುತ್ತಿದ್ದಂತೆ  ಇಂದು ಇನ್ಫೋಸಿಸ್ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಿದ್ದು ತನ್ನ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದೆ. ಕ್ಯಾಂಪಸ್ ನಲ್ಲಿ ಚಿರತೆ ಓಡಾಟ ಹಿನ್ನೆಲೆಯಲ್ಲಿ  ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಇನ್ಫೋಸಿಸ್ ಹ್ಯೂಮನ್ ರೆಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಿದೆ.  ಇಂದು ಬೆಳಗ್ಗೆ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು,  ಚಿರತೆಯ ಚಲನವಲನ ಕ್ಯಾಂಪಸ್ ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಯಾವುದೇ ಸಿಬ್ಬಂದಿಯನ್ನು ಕ್ಯಾಂಪಸ್ ಒಳಗಡೆ ಬಿಡಲಾಗುವುದಿಲ್ಲ ಎಂದು ಸಂಸ್ಥೆ ಆದೇಶ ಹೊರಡಿಸಿದೆ.

Key words: Leopard, Infosys campus, Mysore.