ಕಲ್ಬುರ್ಗಿ,ಮಾರ್ಚ್,30,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಇಂದು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರಕರಣದಲ್ಲಿ ಎಸ್ ಐಟಿ ತನಿಖೆಯಿಂದ ಸತ್ಯ ಹೊರಬರಲ್ಲ. ಸಂತ್ರಸ್ತ ಯುವತಿ ಹೈಕೋರ್ಟ್ ಸಿಜೆಗೆ ಪತ್ರ ಬರೆದಿದ್ದಾಳೆ. ಹೀಗಾಗಿ ಹೈಕೋರ್ಟ್ ಸಿಜೆ ಏನು ಹೇಳ್ತಾರೆ ನೋಡೋಣಾ. ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಡಿ.ಕೆ ಶಿವಕುಮಾರ್ ಮೇಲೆ ಹಲ್ಲೆ ಯತ್ನ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಕಲ್ಲು ಹೊಡೆಯೋರನ್ನ ಗೂಂಡಾಗಿರಿ ಅಂತಾರೆ. ಇದು ಪ್ರಜಾಪ್ರಭುತ್ವದ ವಿರೋಧಿಸಿಯಾಗಿದೆ ಎಂದು ಕಿಡಿಕಾರಿದರು.
Key words: Let -CJ –lead- investigation – CD case-Former CM Siddaramaiah- demands.