ಉಡುಪಿ, ನವೆಂಬರ್ 09, 2019 (www.justkannada.in): ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪನ್ನು ಎಲ್ಲರೂ ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ವೈಯಕ್ತಿಕವಾಗಿಯೂ ಈ ತೀರ್ಪು ಸಮ್ಮತವಾಗಿದೆ. ಮುಸ್ಲಿಮರಿಗೂ ಐದು ಎಕರೆ ಕೊಡಬೇಕು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. ಇದು ಸಮ್ಮತವಾಗಿದೆ. ಮಂದಿರ, ಮಸೀದಿ ಪರಸ್ಪರ ಸಹಕಾರದಲ್ಲಿ ನಿರ್ಮಾಣವಾಗಲಿ ಎಂದು ಪೇಜಾವರಶ್ರೀ ಹೇಳಿದ್ದಾರೆ.
ಸರಕಾರವೇ ರಾಮಮಂದಿರ ನಿರ್ಮಾಣ ಮಾಡಬೇಕು ಎಂಬ ತೀರ್ಪು ಬಂದಿದೆ. ಹಿಂದೂಗಳಿಗೆ ಜನ್ಮಭೂಮಿಯ ಹಕ್ಕು ಮುಖ್ಯ. ಮುಸ್ಲಿಮರಿಗೆ ಮಸೀದಿಗೆ ಜಾಗ ಮುಖ್ಯ. ಈ ನಿಟ್ಟಿನಲ್ಲಿ ನ್ಯಾಯಾಲಯದ ಈ ತೀರ್ಪು ಹಿಂದೂ-ಮುಸ್ಲಿಮರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಎಂದು ಅಭಿಪ್ರಾಯಿಸಿದರು.