ನವದೆಹಲಿ,ಫೆಬ್ರವರಿ,25,2025 (www.justkannada.in): 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಎಂದು ಸಾಬೀತಾಗಿರುವ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
1984ರ ಸಿಖ್ ವಿರೋಧಿ ದಂಗೆಯ ನೇತೃತ್ವ ವಹಿಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಸರಸ್ವತಿ ವಿಹಾರ್ ಹತ್ಯೆಗಳಲ್ಲಿ ಅವರ ಪಾತ್ರದ ಬಗ್ಗೆ ದೆಹಲಿ ನ್ಯಾಯಾಲಯ ಈ ತೀರ್ಪು ನೀಡಿದ್ದು, ಇದು ಅವರ ಎರಡನೇ ಜೀವಾವಧಿ ಶಿಕ್ಷೆಯಾಗಿದೆ. ವಿಶೇಷ ಕೋರ್ಟ್ ನ್ಯಾಯಾಧೀಶೆ ಕಾವೇರಿ ಬವೇಜಾ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.
1984 ನವೆಂಬರ್ 1ರಂದು ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಇಬ್ಬರು ಸಿಖ್ಖರಾದ ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣದೀಪ್ ಸಿಂಗ್ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ.
Key words: Former Congress MP, Sajjan Kumar, sentenced ,life imprisonment