ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ!  ನಟ ಜಗ್ಗೇಶ್ ಮಾರ್ಮಿಕ ಟ್ವೀಟ್

ಬೆಂಗಳೂರು,ಜೂನ್,12,2024 (www.justkannada.in) :  ರೇಣುಕಾಸ್ವಾಮಿ  ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 13 ಮಂದಿಯನ್ನ ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದು ಈ ಬೆನ್ನಲ್ಲ ನಟ ಜಗ್ಗೇಶ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ಮಾಡಿರುವ ನಟ ಜಗ್ಗೇಶ್, ”ಸರ್ವಆತ್ಮಾನೇನಬ್ರಹ್ಮ ಸರ್ವ ಜೀವಿಯಲ್ಲಿ ದೇವರಿದ್ದಾನೆ, ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ!

ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ ಅವನ ಪಾಪಕರ್ಮ ಅವನ ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲಾ ಎಲ್ಲಾ ಕರ್ಮಕ್ಕು ತತಕ್ಷಣ ಪಲಿತಾಂಶ ಉಂಟು! ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲಾ!” ಎಂದು ಟ್ವೀಟ್ ಮಾಡಿದ್ದಾರೆ.

Key words: Life, no right, kill, Jaggesh, tweet