ಹುಬ್ಬಳ್ಳಿ, ನವೆಂಬರ್,3,2023(www.justkannada.in): ಲೋಕಸಭೆ ಚುನಾವಣೆಗೆ ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಬಿಜೆಪಿಗೆ ವಿಪಕ್ಷ ನಾಯಕರನ್ನೇ ಆಯ್ಕೆ ಮಾಡಲು ಆಗುತ್ತಿಲ್ಲ. ಸರ್ಕಾರ ರಚನೆಯಾಗಿ ಐದು ತಿಂಗಳಾದರೂ ವಿಪಕ್ಷ ನಾಯಕನಿಲ್ಲ ಎಂದು ಟೀಕಿಸಿದರು.
ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ವೀಕ್ಷಕರು ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ. ಎಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ವೀಕ್ಷಕರು ಇನ್ನೂ ವರದಿಯನ್ನು ಕೊಟ್ಟಿಲ್ಲ ಎಂದರು.
ಬಿಜೆಪಿಯವರು ಬರ ಸಮೀಕ್ಷೆ ಮಾಡಲಿ. ಕೇಂದ್ರಕ್ಕೆ ವರದಿ ಸಲ್ಲಿಸಲಿ. ಈಗಾಗಲೇ 175 ತಾಲ್ಲೂಕುಗಳನ್ನ ಬರ ಪೀಡಿತ ಎಂಧು ಘೋಷಣೆ ಮಾಡಲಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
Key words: list – candidates – Lok Sabha elections – three to four –months- DCM- DK Shivakumar.