ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ, ಡಿಸೆಂಬರ್‌ 14,2024 (www.justkannada.in): ಮಾಜಿ ಉಪಪ್ರಧಾನಿ,  ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು  ಉಂಟಾಗಿದ್ದು, ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಂದು ವರದಿಯಾಗಿದೆ.

ಎಲ್ ಕೆ ಅಡ್ವಾಣಿ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಮತ್ತು ಅವರನ್ನು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಸದ್ಯ ಎಲ್ ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು ಕೆಲವೆ ಹೊತ್ತಿನಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ. ಎರಡು ದಿನಗಳ ಹಿಂದೆ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.

Key words: LK Advani,  health, admitted, hospital