ಬೆಂಗಳೂರು,ಡಿ,25,2019(www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಲಾಬಿ ಮಾಡುವುದಿಲ್ಲ.ಅಧ್ಯಕ್ಷ ಸ್ಥಾನವನ್ನ ನಾನು ಕೇಳಿ ಪಡೆಯಲ್ಲ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಚಿವ ಎಂ.ಬಿ ಪಾಟೀಲ್, ಎರಡು ಬಾರಿ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವಕಾಶವಿತ್ತು. ಆದರೆ ನಾನೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಡ ಎಂದಿದ್ದೆ. ನಾನು ಕೇಳಿ ಪಡೆದುಕೊಳ್ಳುವುದಿಲ್ಲ. ಮೆರಿಟ್ ಆಧಾರದಲ್ಲಿ ಅಧ್ಯಕ್ಷ ಸ್ಥಾನ ನೀಡಲು ಹೇಳಿದ್ದೇನೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮಾಡುವುದಿಲ್ಲ, ಎಐಸಿಸಿ ವೀಕ್ಷಕರ ಎದುರು ನನ್ನ ಹೆಸರು ಹೇಳಿಲ್ಲ ಎಂದು ತಿಳಿಸಿದರು.
ಮಂಗಳೂರು ಪ್ರತಿಭಟನೆ ವೇಳೆ ಕಲ್ಲುತೂರಾಟದ ದೃಶ್ಯ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್, ಪೊಲೀಸರು ಕಟ್ಟುಕಥೆ ಹೇಳುತ್ತಿದ್ದಾರೆ. ಕೇರಳಾದಿಂಧ ಗಲಭೆಕೋರರು ಬಂದಿದ್ದರು ಅನ್ನೋದು ಶುದ್ಧ ಸುಳ್ಳು. ಉದ್ರಿಕ್ತರು ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಿದ್ದರು ಅನ್ನೋದು ಸುಳ್ಳು. ಗೋಲಿಬಾರ್ ಮಾಡಿ ಅಮಾಯಕರನ್ನ ಸಾಯಿಸಿದ್ದಾರೆ. ಪೊಲೀಸರಿಗೂ ಗಾಯಗಳಾಗಿವೆ. ಆದರೆ ಪೊಲೀಸರು ಆಸ್ಪತ್ರೆಗೆ ದಾಖಲಾಗಿಲ್ಲ. ವಿಡಿಯೋ ಬಿಡುಗಡೆ ಮಾಡುವ ಮೂಲಕ ಜನರ ದಾರಿತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.
Key words: lobby – KPCC president –position-Former Minister -MB Patil