ಮೈಸೂರು,ಜುಲೈ,28,2024 (www.justkannada.in): ಇಂದು ಮೈಸೂರು ಪ್ರವಾಸ ಕೈಗೊಂಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಂಜನಗೂಡಿಗೆ ಭೇಟಿ ನೀಡಿ ಪ್ರವಾಸಿ ಮಂದಿರ ತೆರಳಿದ್ದ ವೇಳೆ ಬೀಗ ತೆಗೆಯದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೆ ಇದೀಗ ಎಚ್ಚೆತ್ತ ಮೈಸೂರು ಜಿಲ್ಲಾಡಳಿತ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
ಈ ಕುರಿತು ಪತ್ರಿಕ ಪ್ರಕಟಣೆ ಹೊರಡಿಸಿದ ಮೈಸೂರು ಜಿಲ್ಲಾಡಳಿತ, ನಂಜನಗೂಡು ಪ್ರವಾಸಿ ಮಂದಿರಕ್ಕೆ ಲಘು ವಿಶ್ರಾಂತಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿದ್ದರು. ಆ ವೇಳೆ ಪ್ರವಾಸಿ ಮಂದಿರಕ್ಕೆ ಬೀಗ ಹಾಕಿರುವ ವಿಚಾರ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಈ ವಿಚಾರ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ವಿಚಾರವಾಗಿ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಡಳಿತ ತಿಳಿಸಿದೆ.
Key words: lock, tourist temple, HDK, district administration