ಬೆಂಗಳೂರು,ಮೇ,10,2021(www.justkannada.in): ಕೊರೋನ ತಡೆಗಾಗಿ ರಾಜ್ಯದಲ್ಲಿ ನಾವು 14 ದಿನಗಳ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಗಳನ್ನು ಎಲ್ಲರೂ ತಪ್ಪದೇ ಅನುಸರಿಸಿ, ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ ಎಂದು ರಾಜ್ಯದ ಜನರಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಇದು ಯಶಸ್ವಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ. ಒಟ್ಟಾಗಿ ನಾವು ಕೊರೋನಾವನ್ನು ಸೋಲಿಸೋಣ. ಸಾರ್ವಜನಿಕರು ಕೂಡ ಸೋಂಕು ನಿಯಂತ್ರಿಸಲು ಸಹಕರಿಸಿ . ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರದೊಂದಿಗೆ ಸಹಕರಿಸಿ ಎಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ.
ಹಾಗೆಯೇ ಎಲ್ಲರೂ ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ, ನಾವು ಒಟ್ಟಾಗಿ ಕೊರೋನಾವನ್ನು ಹಿಮ್ಮೆಟ್ಟಿಸೋಣ ಎಂದು ಮನವಿ ಮಾಡಿದ್ದಾರೆ.
ಕೋವಿಡ್ ಚೈನ್ ಲಿಂಕ್ ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಉಳಿದು, ಉದ್ದೇಶ ಈಡೇರುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ನಿಯಮಗಳು ಜಾರಿಯಾಗುವುದನ್ನು ಖಚಿತಪಡಿಸಬೇಕು ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.
Key words: Lockdown -14 days -Corona -CM BS yeddyurappa- appealed – people