ಬೆಂಗಳೂರು,ಜು,17,2020(www.justkannada.in): ಕೊರೋನಾ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡಲಾಗಿದ್ದು ಈ ನಡುವೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೊಂದಲ ಉಂಟಾಗಿತ್ತು. ಈ ಕುರಿತು ಇದೀಗ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರೆಸುವುದಿಲ್ಲ. ಒಂದು ವಾರದ ಲಾಕ್ ಡೌನ್ ಬಳಿಕ ಬೆಂಗಳೂರಿನಲ್ಲಿ ಎಂದಿನಂತೆ ಇರುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕೊರೋನಾ ನಿಯಂತ್ರಣ ಕುರಿತು 8 ವಲಯಗಳ ಉಸ್ತುವಾರಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ಚರ್ಚಿಸಿದರು. ಈ ಸಭೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಮಾತ್ರ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ. ಸಿಎಂ ಜತೆ ಚರ್ಚಿಸಿ ಈ ಮಾತು ಹೇಳುತ್ತಿದ್ದೇನೆ. ಲಾಕ್ ಡೌನ್ ವಿಸ್ತರಣೆ ಮಾಡಲ್ಲ. ಬದಲಿಗೆ ಕೊರೋನಾ ಸೋಂಕಿರುವ ಆಯಾ ಪ್ರದೇಶಗಳು ಸೀಲ್ ಡೌನ್ ಮುಂದುವರೆಯಲಿದೆ ಎಂದರು.
ಬೆಂಗಳೂರಿನಲ್ಲಿ ಕೊರೋನಾ ಕಂಟ್ರೋಲ್ ಗಾಗಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿತ್ತು. ಕೊರೋನಾ ಚೈನ್ ಬ್ರೇಕ್ ಮಾಡಲು ಒಂದು ವಾರ ಲಾಕ್ ಡೌನ್ ಸಾಲಲ್ಲ. ಹೀಗಾಗಿ ಲಾಕ್ ಡೌನ್ ಮುಂದುವರೆಸಿ ಎಂದು ಬಿಬಿಎಂಪಿ ಅಧಿಕಾರಿಗಳು ಸಿಎಂಗೆ ಮನವಿ ಮಾಡಿದ್ದರು.
Key words: Lockdown –Bangalore-Clarified -Revenue Minister -R. Ashok.