ಬೆಂಗಳೂರು,ಮೇ,22,2021(www.justkannada.in): ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿರುವ ಹಿನ್ನೆಲೆ ಮೇ 24ರವರೆಗೆ ಜಾರಿಯಲ್ಲಿರುವ ಲಾಕ್ ಡೌನ್ ಅನ್ನ ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಕಟ್ಟುನಿಟ್ಟಿನ ಲಾಕ್ ಡೌನ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಪೊಲೀಸರು ಬ್ಯಾರಿಕೇಡ್ ಹಾಕಿ ಕಾರ್ಯಾಚರಣೆ ಮುಂದುವರೆಸಿದ್ದು ಅನಗತ್ಯವಾಗಿ ಓಡಾಡುವವರ ವಾಹನಗಳನ್ನ ಜಪ್ತಿ ಮಾಡುತ್ತಿದ್ದಾರೆ. 10 ಗಂಟೆಯ ನಂತರ ಯಾರು ಸಹ ಓಡಾಡಬಾರದು. ಆದರೆ ಅನಗತ್ಯವಾಗಿ ರೋಡಿಗಿಳಿದವರಿಗೆ ಪೊಲೀಸರು ಬಿಸಿಮುಟ್ಟಿಸುತ್ತಿದ್ದಾರೆ.
ಈ ಮಧ್ಯೆ ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಲ್ಲಿ ಪೊಲೀಸರು ಒಂದುವರೆ ಗಂಟೆಯಲ್ಲಿ ಬರೋಬ್ಬರಿ 50ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಅನಗತ್ಯವಾಗಿ ಓಡಾಡುತ್ತಿದ್ದ ಕಾರು ಬೈಕ್, ಆಟೋಗಳನ್ನ ಜಪ್ತಿ ಮಾಡಿರುವುದಲ್ಲದೇ ವಾಹನ ಸವಾರರನ್ನೂ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಾಗೆಯೇ ಕೆ.ಆರ್ ಪುರಂನ ಟಿನ್ ಫ್ಯಾಕ್ಟರಿ ಬಳಿ 15ಕ್ಕೂ ಹೆಚ್ಚು ವಾಹನಗಳು, ಹುಣಸೆಮಾರನಹಳ್ಳಿಯಲ್ಲಿ 10ಕ್ಕೂ ಹೆಚ್ಚು ವಾಹನಗಳು ಮತ್ತು ಅದರ ಚಾಲಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Key words: Lockdown-bangalore- Police – more than- 50 vehicles -sieze