ಬೆಳಗಾವಿ,ಮೇ,15,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗೋಕಾಕ್ ನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ರಮೇಶ್ ಜಾರಕಿಹೊಳಿ, , ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ ಡೌನ್ ಮುಂದುವರಿಕೆ ಮಾಡುವುದು ಸೂಕ್ತ. ಇದರಿಂದ ಲಾಕ್ ಡೌನ್ ನಿಯಂತ್ರಣ ಮಾಡಬಹುದು ಎಂದು ಹೇಳಿದ್ದಾರೆ.
ವಿಪಕ್ಷದವರು ಮೊದಲು ಲಸಿಕೆ ವಿರೋಧಿಸಿದ್ದರು. ಈಗ ಅವರೇ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಕೊರೊನಾ ವಿಚಾರದಲ್ಲಿ ವಿಪಕ್ಷದವರು ರಾಜಕೀಯ ಮಾಡಬಾರದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
Key words: Lockdown – Corona -chain link- break- Former Minister -Ramesh jarakiholli.