ಬೆಂಗಳೂರು, ಜುಲೈ 13, 2020 (www.justkannada.in): ಮುಂಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಇಂದು ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಕೊರೋನಾ ಸೋಂಕು ಹೆಚ್ಚಿರುವಂತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ನಡೆಸಿದರು.
ಇಂತಹ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಆಯಾ ಜಿಲ್ಲಾಧಿಕಾರಿಗಳೇ ಲಾಕ್ ಡೌನ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಿದರು. ಇಂತಹ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದಂತ ವೀಡಿಯೋ ಕಾನ್ಫೆರೆನ್ಸ್ ನ ಮುಖ್ಯಾಂಶಗಳು ಈ ಕೆಳಗಿನಂತಿವೆ.
ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡ, ಧಾರವಾಡ, ಬಳ್ಳಾರಿ, ಉಡುಪಿ , ಕಲಬುರಗಿ ಹೆಚ್ಚು ಪ್ರಕರಣ ದಾಖಲಾಗಿದೆ. ಬೀದರ್, ಧಾರವಾಡ, ಗದಗ, ಮೈಸೂರು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದರು. ಬೀದರ್ ಜಿಲ್ಲೆ
ಕಂಟೇನ್ ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕಾಗಿದೆ. ಅಲ್ಲದೆ, ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿ ಕೊರತೆ ಇರುವಲ್ಲಿ ಗುತ್ತಿಗೆ ಆಧಾರದಲ್ಲಿ 6 ತಿಂಗಳ ಅವಧಿಗೆ ನೇಮಕ ಮಾಡುವಂತೆ ಸೂಚಿಸಲಾಯಿತು.
ಹೊರಗಿನಿಂದ ವಲಸೆ ಬಂದವರ ಕ್ವಾರಂಟೈನ್ ಮತ್ತು ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಯಿತು.
ಬೂತ್ ಮಟ್ಟದಲ್ಲಿ ಕ್ವಾರಂಟೈನ್, ಸಂಪರ್ಕಿತರ ಪತ್ತೆ ಹಚ್ಚುವುದು, ಮನೆ ಮನೆ ಸಮೀಕ್ಷೆ ನಡೆಸುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಲು ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ,. ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರ ಸಹಕಾರವನ್ನು ಪಡೆಯುವಂತೆ ಸೂಚಿಸಲಾಯಿತು. 60 ವರ್ಷ ಮೇಲ್ಪಟ್ಟವರು ಹಾಗೂ ಇತರ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರತ್ಯೇಕವಾಗಿರಿಸಬೇಕು ಮತ್ತು ಐಎಲ್‌ಐ ಮತ್ತು ಉಸಿರಾಟದ ತೊಂದರೆ ಇರುವವರನ್ನು ಗುರುತಿಸಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು.
ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚು ಮಳೆಯಾಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಲಾಯಿತು. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಹರಿದುಬರುವ ನೀರಿನ ಪ್ರಮಾಣದ ಕುರಿತು ಜಾಗೃತರಾಗಿರುವಂತೆ ತಿಳಿಸಿದರು. ಅಲ್ಲದೆ, ರಾಜಾಪೂರ ಬ್ಯಾರೇಜಿನಲ್ಲಿ ರಾಜ್ಯದ ಎಂಜಿನಿಯರ್ ಒಬ್ಬರನ್ನು ನಿಯೋಜಿಸುವಂತೆ ಸೂಚಿಸಲಾಯಿತು.