ಬೆಂಗಳೂರು,ಮೇ,17,2021(www.justkannada.in): ಕೊರೋನಾ 2ನೇ ಅಲೆ ತಗ್ಗಿಸಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಲಾಕ್ ಡೌನ್ ಅನ್ನ ಮತ್ತೆ ವಿಸ್ತರಿಸುವ ಕುರಿತು ಚರ್ಚೆ ನಡೆಯುತ್ತಿದೆ. ಈ ಕುರಿತು ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೆಲ ಸಲಹೆಗಳನ್ನ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್ ಡೌನ್ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‌ಡೌನ್’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌ ನ್ ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್‌ಡೌನ್’ ಕಲ್ಪನೆಯೇ ಆಗಿತ್ತು ಎಂದಿದ್ದಾರೆ.
ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್ ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್ ಡೌನ್ ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು ಎಂದು ಹೆಚ್.ಡಿಕೆ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ಲಾಕ್‌ಡೌನ್ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್ ಡೌನ್ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್ ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ ಎಂದು ಸರ್ಕಾರಕ್ಕೆ ಹೆಚ್.ಡಿಕೆ ಸಲಹೆ ನೀಡಿದ್ದಾರೆ.
ENGLISH SUMMARY…
Let the govt. provide relief to the people and impose lockdown: Former CM HDK
Bengaluru, May 17, 2021 (www.justkannada.in): Former Chief Minister H.D. Kumaraswamy today informed that if the government wants to extend the lockdown period let it provide the required relief to the people and then extend it.
In his tweet today the former CM has mentioned that the State Govt. should provide food package and other relief measures if it is going to extend the lockdown period. We have also suggested it during the all-party meeting.
The State Govt. should learn from our neighboring states. Let them see how our neighboring states are imposing lockdown. “Only prevention of people from coming out of houses should not be the objective. Controlling the pandemic should be their aim. Let them announce relief package,” he added.
Keywords: Former CM H.D. Kumaraswamy/ State Govt. / extension of lockdown period/ relief measures/ package
Key words: Lockdown- extension-former cm-HD Kumaraswamy- advice – government