ಮುಂಬೈ, ಜೂ,29,2020(www.justkannada.in): ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಜುಲೈ 31ರವರೆಗೂ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ.
ಈ ಕುರಿತು ಇಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಜುಲೈ 31ರವರೆಗೂ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಪಾಲನೆ ಮಾಡಬೇಕೆಂದು ಸಾರ್ವಜನಿಕರಿಗೆ ಸೂಚನೆ ನೀಡಿದೆ. ಜುಲೈ ಅಂತ್ಯದವರೆಗೂ ಲಾಕ್ಡೌನ್ ವಿಸ್ತರಿಸಿರುವ ಹಿನ್ನೆಲೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಮತ್ತು ರಾಜ್ಯದ ಮಹಾನಗರ ಪಾಲಿಕೆಗಳ ಆಯುಕ್ತರು, ಅನಗತ್ಯ ಚಟುವಟಿಕೆಗಳು ಮತ್ತು ವ್ಯಕ್ತಿಗಳ ಚಲನೆಯನ್ನು ನಿಯಂತ್ರಿಸಲು ನಿರ್ದಿಷ್ಟ ಕ್ರಮಗಳು ಮತ್ತು ಅಗತ್ಯ ನಿರ್ಬಂಧಗಳನ್ನು ಜಾರಿಗೊಳಿಸಬಹುದು. ಇನ್ನು ಮಾಸ್ಕ್ ಧರಿಸುವುದು ಕಡ್ಡಾಯ ಹಾಗು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿರುವ ಸರ್ಕಾರ ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ 1,64,626 ಮಂದಿಗೆ ಕೊರೋನಾ ಸೋಂಕಿದರಿದ್ದಾರೆ. ಈ ಪೈಕಿ 70,607 ಕೇಸ್ ಸಕ್ರಿಯವಾಗಿದೆ. 86,575 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 7,429 ಜನರಿಗೆ ಕೊರೊನಾಗೆ ಬಲಿಯಾಗಿದ್ದಾರೆ..
Key words: Lockdown -extension –Maharashtra- till- July 31st.