ಬೆಂಗಳೂರು,ಮೇ,,12,2021(www.justkannada.in): ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ವಿಧಿಸಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದರು.
ಮಾಧ್ಯಮಗಳ ಜತೆ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಸರ್ಕಾರ ಕಟ್ಟುನಿಟ್ಟಾಗಿ ಲಾಕ್ ಡೌನ್ ಮಾಡಿಲ್ಲ. ಕಾರ್ಮಿಕರು ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಕಾರ್ಮಿಕರಿಗೆ ಯಾವುದೇ ಪರಿಹಾರವನ್ನ ನೀಡಿಲ್ಲ. ಕಾರ್ಮಿಕರಿಗೆ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಎಂದಿದ್ದೆ. ಆದರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಜನ ಆಕ್ಸಿಜನ್ ಪ್ರಾಣ ಬಿಡುತ್ತಿದ್ದಾರೆ. ಕೋವಿಡ್ ಲಸಿಕೆ ಮೊದಲ ಡೋಸ್ ಪಡೆದವರಿಗೆ 2ನೇ ಡೋಸ್ ಸಿಗುತ್ತಿಲ್ಲ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಿಗುತ್ತಿಲ್ಲ. ನಿಜಕ್ಕೂ ಸರ್ಕಾರಕ್ಕೆ ಜವಾಬ್ದಾರಿ ಇದೆಯಾ…? ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.
Key words: lockdown-government –responsibility- Opposition leader -Siddaramaiah