ಕೊಪ್ಪಳ,ಏಪ್ರಿಲ್,12,2021(www.justkannada.in): ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ. ನಿನ್ನೆ ಒಂದೇ ದಿನ 10 ಸಾವಿರಕ್ಕೂ ಅಧಿಕ ಕೇಸ್ ಬಂದಿವೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ ಎಂದು ವಾಗ್ದಾಳಿ ನಡೆಸಿದರು.
ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಮಾಡುತ್ತಿಲ್ಲ. ಹೀಗಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಸಿದ್ಧರಾಮಯ್ಯ ತಿಳಿಸಿದರು.
Key words: Lockdown – not – solution – corona control-Former CM -Siddaramaiah.