ಲೋಕಸಭಾ ಚುನಾವಣಾ ಫಲಿತಾಂಶ: ಎನ್ ಡಿಎ 299, ರಾಜ್ಯದಲ್ಲಿ ಬಿಜೆಪಿ 16 ಕ್ಷೇತ್ರಗಳಲ್ಲಿ ಮುನ್ನಡೆ.

ಬೆಂಗಳೂರು,ಜೂನ್,4,2024 (www.justkannada.in):  ದೇಶದ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಎನ್ ಡಿಎ 299 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ  ಮೂಲಕ 3ನೇ ಬಾರಿಯೂ ಅಧಿಕಾರಕ್ಕೇರುವ ತವಕದಲ್ಲಿದೆ.

ಇನ್ನು ರಾಜ್ಯದಲ್ಲಿಯೂ ಸಹ ಬಿಜೆಪಿ ಮೇಲುಗೈ ಸಾಧಿಸುತ್ತಿದ್ದು 28 ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 10 ಜೆಡಿಎಸ್ 2 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.  ದೇಶದಲ್ಲಿ ಎನ್ ಡಿಎ ಮೈತ್ರಿಕೂಟ 224ಇತರೇ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್, ಮಂಡ್ಯ ಕ್ಷೇತ್ರದಲ್ಲಿ  ಜೆಡಿಎಸ್ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಭರ್ಜರಿ ಲೀಡ್ ಪಡೆದಿದ್ದಾರೆ.

Key words: Lok Sabha, Election, Results, BJP, leading