ನವದೆಹಲಿ:ಮೇ-12:(www.justkannada.in) ಲೋಕಸಭಾ ಚುನಾವನೆಯ 6ನೇ ಹಂತದ ಮತದಾನ ಭರದಿಂದ ಸಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೆಹಲಿಯ ಔರಂಗಜೇಬ್ ಲೇನ್ನಲ್ಲಿ ಮತದಾನ ಮಾಡಿದರು.
ಜೌರಂಗಾಜೇಬ್ ಲೇನ್ ನ ಎನ್ಪಿ ಸಿನಿಯರ್ ಸೆಕೆಂಡರಿ ಸ್ಕೂಲ್ ಮತಗಟ್ಟೆಯಲ್ಲಿಮ್ಮ ಹಕ್ಕು ಚಲಾಯಿಸಿದರು. ಈ ವೇಳೆ ಮಾತನಾಡಿದ ಅವರು ನೋಟು ಅಮಾನೀಕರಣ, ರೈತರ ಸಮಸ್ಯೆಗಳು, ಗಬ್ಬರ್ ಸಿಂಗ್ ಟ್ಯಾಕ್ಸ್ ಮತ್ತು ರಫೇಲ್ ಒಪ್ಪಂದದಲ್ಲಿನ ಭ್ರಷ್ಟಾಚಾರ ಸೇರಿದಂತೆ ಅನೇಕ ಪ್ರಮುಖ ಅಂಶಗಳ ವಿರುದ್ಧ ಈ ಚುನಾವಣೆಯಲ್ಲಿ ಹೋರಾಟ ನಡೆಯುತ್ತಿದೆ ಎಂದರು.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ದ್ವೇಷವನ್ನು ಬಳಸಿದರೆ, ನಾನು ಪ್ರೀತಿಯನ್ನು ಬಳಕೆ ಮಾಡಿದ್ದೇವೆ. ನಾವು ಗೆಲ್ಲುತ್ತೇವೆ ಎಂಬ ಭರವಸೆ ಇದೆ ಎಂದು ತಿಳಿಸಿದ್ದಾರೆ.
ಈ ನಡುವೆ ರಾಷ್ಟ್ರದ ಪ್ರಥಮ ಪ್ರಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರಪತಿ ಭವನದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ್ದಾರೆ.