ಹೊಸದಿಲ್ಲಿ , ಮಾ.೨೩, ೨೦೨೪ : ಲೋಕಸಭೆ ಚುನಾವಣೆ 2024, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್ನಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿಸರುವ ಬಿಜೆಪಿ, ಈ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಅಂಗವಾಗಿರುವ ಈಶಾನ್ಯ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಬಿಜೆಪಿ ಶುಕ್ರವಾರ ಹೇಳಿದೆ . ಆ ಮೂಲಕ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದೆ.
ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿರುವ ಈ ರಾಜ್ಯಗಳಲ್ಲಿ, ಅಶಾಂತಿಯ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ತಹಬದಿಗೆ ತರುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ, ಈ ಮೂರು ರಾಜ್ಯಗಳಲ್ಲಿ ಅಭ್ಯರ್ಥಿಗಳನ್ನು ಹಾಕದಿರಲು ಬಿಜೆಪಿ ನಿರ್ಧರಿಸಿದೆ.
ಬಿಜೆಪಿಯು ಮೇಘಾಲಯದ ಎರಡು ಸ್ಥಾನಗಳಲ್ಲಿ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಅಭ್ಯರ್ಥಿಗಳನ್ನು ಬೆಂಬಲಿಸುತ್ತದೆ, ಜೊತೆಗೆ ಘರ್ಷಣೆ ಪೀಡಿತ ಮಣಿಪುರದ ಹೊರ ಮಣಿಪುರದಿಂದ ನಾಗಾ ಪೀಪಲ್ಸ್ ಫ್ರಂಟ್ ಅಭ್ಯರ್ಥಿ ಮತ್ತು ನೆಫಿಯು ರಿಯೊ ನೇತೃತ್ವದ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ. ಪಕ್ಷದ ಈಶಾನ್ಯ ಉಸ್ತುವಾರಿ ಸಂಬಿತ್ ಪಾತ್ರಾ ಅವರು ಎಕ್ಸ್ನಲ್ಲಿ ಘೋಷಣೆ ಮಾಡಿದ್ದಾರೆ.
“ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಜಿ ಅವರ ಸೂಚನೆಗಳ ಪ್ರಕಾರ, ಮೇಘಾಲಯದ (ಶಿಲ್ಲಾಂಗ್ ಮತ್ತು ತುರಾ) ಎರಡೂ ಸ್ಥಾನಗಳಲ್ಲಿ ಎನ್ಪಿಪಿಯ ಲೋಕಸಭಾ ಅಭ್ಯರ್ಥಿಗಳಿಗೆ ಬಿಜೆಪಿ ತನ್ನ ಬೆಂಬಲವನ್ನು ನೀಡುತ್ತದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ, ಹೊರ ಮಣಿಪುರ ಕ್ಷೇತ್ರದಲ್ಲಿ ಎನ್ಪಿಎಫ್ಗೆ ಮತ್ತು 2024 ರ ಸಂಸತ್ತಿನ ಚುನಾವಣೆಯಲ್ಲಿ ನಾಗಾಲ್ಯಾಂಡ್ನಲ್ಲಿ ಎನ್ಡಿಪಿಪಿ” ಎಂದು ಪತ್ರಾ ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೇಘಾಲಯದಲ್ಲಿ, ಮಾಜಿ ಕಾಂಗ್ರೆಸ್ ನಾಯಕಿ ಅಂಪಾರೀನ್ ಲಿಂಗ್ಡೋಹ್ ಶಿಲ್ಲಾಂಗ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಮಾಜಿ ಕೇಂದ್ರ ಸಚಿವ ಅಗಾಥಾ ಸಂಗ್ಮಾ ತುರಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.
key words : Lok Sabha polls 2024 ̲ BJP to ̲ support regional party ̲ candidates ̲ Meghalaya ̲ Manipur ̲ Nagaland