ನವದೆಹಲಿ:ಮೇ-6:(www.justkannada.in) ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ಸ್ಪಷ್ಟ ಬಹುತ ಸಿಗುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಮೈತ್ರಿ ಪಕ್ಷಗಳ ಅಗತ್ಯವಿದೆ ಎಂದು ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ರಾಮ್ ಮಾಧವ್, 543 ಸ್ಥಾನಗಳ ಪೈಕಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರಎ. ಅಲ್ಲದೇ ಸರ್ಕಾರ ರಚನೆಗೆ ಮೈತ್ರಿ ಪಕ್ಷಗಳ ಬೆಂಬಲ ಅಗತ್ಯ ಎಂದಿದ್ದಾರೆ.
ಒಂದು ವೇಳೆ 271 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ನಾವು ಸಂತೋಷಪಡುತ್ತೇವೆ. ಆಗ ಎನ್ ಡಿಎ ಸ್ಪಷ್ಟ ಬಹುಮತ ಹೊಂದಲಿದೆ ಆದರೆ ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಮೈತ್ರಿ ಪಕ್ಷಗಳ ಅಗತ್ಯವಿದೆ ಎಂದು ಹೇಳಿದ್ದಾರೆ.
2014ರಲ್ಲಿ ಉತ್ತರ ಭಾರತ, ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಉತ್ತಮ ಸಾಧನೆ ಮಾಡಿದ್ದ ಬಿಜೆಪಿ ಈ ಬಾರಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಈಶಾನ್ಯ ಭಾರತದಲ್ಲಿ ಬಿಜೆಪಿಯ ಪ್ರಾಬಲ್ಯ ವಿಸ್ತರಣೆಯಾಗಿದೆ. ದಕ್ಷಿಣ ಭಾರತದಲ್ಲೂ ಇದೇ ರೀತಿಯ ಪ್ರಯತ್ನ ಮಾಡಲಾಗಿದೆ. ರಾಜಕಾರಣಿಯಾಗಿ ಹೇಳುವುದಾದರೆ ಆಡಳಿತ ವಿರೋಧಿ ಅಲೆಯಿಂದಾಗಿ ಕಳೆದ ಬಾರಿ ಮಾಡಿದ ಸಾಧನೆಯನ್ನು ಈ ಬಾರಿ ಮಾಡುವ ಸಾಧ್ಯತೆ ಇಲ್ಲ ಎಂದು ರಾಮ್ ಮಾಧವ್ ಹೇಳಿದ್ದಾರೆ.