ರಾಜ್ಯದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನ ಬಂದಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಬೆಂಗಳೂರು,ಜೂನ್,5,2024 (www.justkannada.in): ಲೋಕಸಭೆ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದಷ್ಟು ಸ್ಥಾನ ನಮಗೆ ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಿನ್ನೆ ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ರಾಜ್ಯದಲ್ಲಿ ಬಿಜೆಪಿ 17, ಕಾಂಗ್ರೆಸ್,9, ಜೆಡಿಎಸ್ 2 ಸ್ಥಾನಗಳನ್ನ ಗೆದ್ದಿದೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯದಲ್ಲಿ ನಾವು ನಿರೀಕ್ಷೆ ಮಾಡಿದ್ದಷ್ಟು ಸ್ಥಾನ ಬಂದಿಲ್ಲ.  ರಾಜ್ಯದಲ್ಲಿ  20 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದವು. ಆದರೆ ನಾವು ನಿರೀಕ್ಷೆ ಮಾಡಿದಷ್ಟು ಕ್ಷೇತ್ರ ಗೆಲ್ಲಲು ಆಗಲಿಲ್ಲ ನಮ್ಮ ಲೆಕ್ಕಾಚಾರ ಉಲ್ಟಾ ಆಗಿದೆ.  ಆದರೆ ಮತ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ ಬಾರಿ 1 ಸ್ಥಾನ ಗೆದ್ದಿದ್ದವು. ಈ ಬಾರಿ 9 ಸ್ಥಾನ ಗೆದ್ದಿದ್ದೇವೆ ಎಂದು ತಿಳಿಸಿದರು.

Key words: lokasabha, election, result, Dr. G. Parameshwar