ನವದೆಹಲಿ,ಮಾರ್ಚ್,16,2024(www.justkannada.in): ಲೋಕಸಭೆ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದ್ದು, ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಡಲು ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್ಡೆಸ್ಕ್, ವಿದ್ಯುತ್ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ ಎಂದರು.
ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. 11 ರಾಜ್ಯಗಳ ಚುನಾವಣೆಯಲ್ಲಿ 3400 ಕೋಟಿ ರೂ. ಸೀಜ್ ಮಾಡಲಾಗಿದೆ. ಚುನಾವಣೆ ವೇಳೆ ವಶಕ್ಕೆ 3400 ಕೋಟಿ ರೂಪಾಯಿ ಸೀಜ್ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದು ರಾಜೀವ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಆ್ಯಪ್ ಮೂಲಕ ತಮ್ಮ ಅಭ್ಯರ್ಥಿಗಳ ಮಾಹಿತಿ ಲಭ್ಯ ಇರಲಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್ ನಲ್ಲಿರಲಿದೆ. ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು. ರೌಡಿಶೀಟರ್ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದು ತಿಳಿಸಿದರು
Key words: lokasabha election-Voting – home disabled- people