ಕೋಲಾರ,ಫೆಬ್ರವರಿ,10,2023(www.justkannada.in): ಬೆಳ್ಳಂಬೆಳಿಗ್ಗೆ ಕೋಲಾರದಲ್ಲಿ ಅರಣ್ಯಾಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರದಲ್ಲಿ ಡಿಸಿಎಫ್ ವೆಂಕಟೇಶ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ 8 ಕಡೆ ಲೋಕಾಯುಕ್ತ ದಾಳಿಯಾಗಿದೆ. ಬೆಳ್ಳಂಬೆಳಿಗ್ಗೆ 5 ಗಂಟೆಗೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿಯಾಗಿದೆ. 8 ತಂಡಗಳಾಗಿ ದಾಳಿ ನಡೆಸಿದ್ದಾರೆ.
Key words: Lokayukta-attack-forest -officer – inspection.