ಸಿಎಂ ಸಿದ್ದರಾಮಯ್ಯಗೆ ಶಾಕ್: ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್

ಮೈಸೂರು,ನವೆಂಬರ್,4,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇದೀಗ ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ  ಪ್ರಕರಣದ ಎ1 ಆಗಿರುವ  ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನವೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಲೋಕಾಯುಕ್ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಈಗಾಗಲೇ  ಎ2 ಪಾರ್ವತಿ ಸಿದ್ದರಾಮಯ್ಯ , ಎ3 ಮಲ್ಲಿಕಾರ್ಜುನ್,  ಎ4 ದೇವರಾಜು ಸೇರಿ ಹಲವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದು ಹಲವು ಮಾಹಿತಿ ಕಲೆ ಹಾಕಿದ್ದಾರೆ. ಈ ನಡುವೆ ಇದೀಗ ಸಿಎಂ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ ಎನ್ನಲಾಗಿದೆ.

Key words: Lokayukta, notice, CM Siddaramaiah,  attend, hearing