ರಾಜ್ಯದ 7 ಜಿಲ್ಲೆಗಳಲ್ಲಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 6,2025 (www.justkannada.in): ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ  ಲೋಕಾಯುಕ್ತ ಶಾಕ್ ನೀಡಿದ್ದು,  ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್​, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್.ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್ ​ಸಿ ವೈದ್ಯ ಜಗದೀಶ್ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

Key words: Lokayukta raids, 7 districts, inspects, residences