ಕಲಬುರಗಿ,ಮಾರ್ಚ್, 27,2025 (www.justkannada.in): ಬ್ಲಾಕ್ ಲಿಸ್ಟ್ ನಲ್ಲಿರುವ ಆರ್ ಟಿಐ ಕಾರ್ಯಕರ್ತ ಹೆಸರು ತೆಗೆಯಲು ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ರಾಜ್ಯ ಮಾಹಿತಿ ಆಯೋಗದ ಆಯುಕ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯೋಗದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಲೋಕಾಯುಕ್ತರ ಬಲೆಗೆ ಬಿದ್ದಿರುವ ಅಧಿಕಾರಿ .ಬ್ಲಾಕ್ ಲಿಸ್ಟ್ ನಲ್ಲಿರುವ ಆರ್ ಟಿಐ ಕಾರ್ಯಕರ್ತರ ಹೆಸರು ತೆಗೆಯಲು ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಸಾಸಿ ಬೆನಕನಹಳ್ಳಿಯಿಂದ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈಗಾಗಲೇ 1 ಲಕ್ಷ ರೂ, ಗಳನ್ನು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡಿದ್ದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಕಲಬುರಗಿಯ ತಮ್ಮ ಕಚೇರಿಯಲ್ಲಿ ಉಳಿದ ಹಣ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್ ಪಿ ಗೀತಾ ಬೇನಾಳ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಎಸ್.ಪಿ ಬಿಕೆ. ಉಮೇಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ, ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಸಿಬ್ಬಂದಿಯವರಾದ ಮಲ್ಲಿನಾಥ್, ಹನುಮಂತ, ಬಸವರಾಜ್, ಪೈಮೊದಿನ್, ತಂಡದಿಂದ ತನಿಖೆ ನಡೆಯುತ್ತಿದೆ.
Key words: State Information Commission, Commissioner, Lokayukta, trap