ಕೊಪ್ಪಳ,ಡಿಸೆಂಬರ್,11,2024 (www.justkannada.in): ಬೈಕ್ ಗೆ ಲಾರಿ ಡಿಕ್ಕಿಯಾಗಿ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದಿದೆ.
ಜಿಲ್ಲೆಯ ಗಂಗಾಪತಿಯ ಕೆಸರಟ್ಟಿ ಬಳಿ ಈ ಘಟನೆ ನಡೆದಿದೆ. ಗಂಗಾವತಿ ಮರಕುಂಬಿ ಗ್ರಾಮದ ಮಂಜುನಾಥ್ ಮತ್ತು ನೇತ್ರಾವತಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ದಂಪತಿ ಕೂಲಿ ಕೆಲಸಕ್ಕೆಂದು ಗಂಗಾವತಿಗೆ ತೆರಳುತ್ತಿದ್ದ ವೇಳೆ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ದಂಪತಿಗಳಿಬ್ಬರು ಸಾವನ್ನಪ್ಪಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಗಂಗಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Key words: Lorry collision, Couple, death, bike