ಲಾರಿ ಮಾಲೀಕರ ಮುಷ್ಕರ: ಮೊದಲ ಸುತ್ತಿನ ಸಂಧಾನ ಸಭೆ ವಿಫಲ

ಬೆಂಗಳೂರು,ಏಪ್ರಿಲ್,15,2025 (www.justkannada.in): ಡೀಸೆಲ್ ಬೆಲೆ ಇಳಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದು, ಲಾರಿಗಳ ಸಂಚಾರ ಬಂದ್ ಆಗಿವೆ.

ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಇಂದು  ಸಾರಿಗೆ ಸಚಿವ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಮೊದಲ ಸುತ್ತಿನ ಸಂಧಾನ ಸಭೆ ನಡೆಯಿತು. ಆದರೆ ಮೊದಲ ಸುತ್ತಿನ ಸಂಧಾನ ಸಭೆ ವಿಫಲವಾಗಿದೆ.  ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.

ಸಂಜೆ 5.30ಕ್ಕೆ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲಾರಿ ಮಾಲೀಕರ ಸಂಘದ ಜತೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Lorry owner, strike,  First round, meeting, fails