ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಏ.14ರಿಂದ ಲಾರಿ ಮಾಲೀಕರ ಮುಷ್ಕರ

ಬೆಂಗಳೂರು,ಏಪ್ರಿಲ್,5,2025 (www.justkannada.in): ರಾಜ್ಯದಲ್ಲಿ ಡೀಸೆಲ್ ಬೆಲೆ ಏರಕೆ, ಟೋಲ್ ದರ ಹೆಚ್ಚಳ ಖಂಡಿಸಿ ಲಾರಿ ಮಾಲೀಕರ ಸಂಘ ಏಪ್ರಿಲ್ 14ರಿಂದ ಮುಷ್ಕರ ನಡೆಸಲು ಮುಂದಾಗಿದೆ.

ಏಪ್ರಿಲ್ 14 ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. ಅಂದು ರಾಜ್ಯಾದ್ಯಂತ ಎಲ್ಲಾ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದ್ದು, ಗೂಡ್ಸ್ ವಾಹನಗಳು, ಏರ್‌ಪೋರ್ಟ್‌ ಟ್ಯಾಕ್ಸಿಗಳೂ ಸಹ ಸಂಪೂರ್ಣ ಬಂದ್‌ ಆಗಲಿದೆ. ಸುಮಾರು 6 ಲಕ್ಷ ಲಾರಿಗಳು ಗೂಡ್ಸ್ ವಾಹನಗಳ ಸಂಚಾರ ಬಂದ್ ಆಗಲಿದೆ.

ಈ ಕುರಿತು ಮಾತನಾಡಿರುವ ಲಾರಿ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಗಪ್ಪ, ಡಿಸೇಲ್ ಬೆಲೆ 7 ತಿಂಗಳಲ್ಲಿ 5 ರೂ ಏರಿಕೆಯಾಗಿದೆ. ಏನಾದರೂ ಫ್ರೀ ಕೊಡಲಿ, ಆದರೆ ಹೊಟ್ಟೆ ಮೇಲೆ ಹೊಡೆದು ದರ ಏರಿಕೆ ಮಾಡೋದು ಸರಿಯಲ್ಲ. ಫಿಟ್ನೆಸ್ ಫೀಸ್, ಬಾರ್ಡರ್ ಚೆಕ್ ಪೋಸ್ಟ್, ಡಿಸೇಲ್ ದರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.  ಮುಷ್ಕರಕ್ಕೆ ಪೆಟ್ರೋಲ್ ಮಾಲೀಕರು ಬೆಂಬಲ ಕೊಟ್ಟಿದ್ದಾರೆ. ಏರ್ಪೋಟ್ ಟ್ಯಾಕ್ಸಿ, ಜಲ್ಲಿ ಮರಳು, ಸೇರಿದಂತೆ ಗೂಡ್ಸ್ ವಾಹನಗಳು ಬಂದ್ ಆಗಲಿವೆ. ಎಲ್ಲಾ ಬಗೆಯ ವಾಣಿಜ್ಯ ವಾಹನಗಳ 9 ಲಕ್ಷ ವಾಹನಗಳು ಸ್ಥಗಿತವಾಗಲಿವೆ ಎಂದು ಮಾಹಿತಿ ನೀಡಿದರು.

Key words: Lorry owners, strike, April 14 to, diesel, price hike