ಬೆಂಗಳೂರು,ಏಪ್ರಿಲ್,14,2025 (www.justkannada.in): ಡೀಸೆಲ್ ದರ ಹೆಚ್ಚಳ ನಿರ್ಧಾರ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಮುಂದಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಲಾರಿಗಳ ಸಂಚಾರ ಬಂದ್ ಆಗಲಿದೆ.
ಈ ಕುರಿತು ಮಾತನಾಡಿರುವ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ, ಲಾರಿ ಮುಷ್ಕರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಘೋಷಣೆ ಮಾಡಿದಂತೆ ಮುಷ್ಕರ ಮಾಡುವುದು ನಿಶ್ಚಿತ. ನಮ್ಮನ್ನು ಇದುವರೆಗೂ ಯಾರೂ ಕರೆದು ಮಾತನಾಡಿಲ್ಲ. ಇಂದು ಮಧ್ಯರಾತ್ರಿಯಿಂದಲೇ ಲಾರಿಗಳ ಸಂಚಾರ ಬಂದ್ ಆಗಲಿದೆ ಎಂದರು.
ಡೀಸೆಲ್ ದರ ಹೆಚ್ಚಳ, ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ ಮಾಡಿರುವ ಆದೇಶವನ್ನ ಹಿಂಪಡೆಯುವಂತೆ ಲಾರಿ ಮಾಲೀಕರ ಸಂಘ ಆಗ್ರಹಿಸಿದೆ. ಹಾಗೆಯೇ ಬಾರ್ಡರ್ ಚೆಕ್ ಪೋಸ್ಟ್ ತೆರವು ಮಾಡಬೇಕಂದು ಒತ್ತಾಯಿಸಿದೆ.
Key words: lorry, strike, announced