ಮೆಲ್ಬೋರ್ನ್,ಡಿಸೆಂಬರ್,30,2024 (www.justkannada.in) ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ 184 ರನ್ ಗಳ ಸೋಲನುಭವಿಸಿದೆ.
ಮೆಲ್ಬೋರ್ನ್ ನಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದ್ದು ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದು ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಗೆ ಇಳಿದ ಆಸ್ಟ್ರೇಲಿಯಾ 474 ರನ್ ಗಳಿಗೆ ಆಲ್ ಔಟ್ ಆಯಿತು. ನಂತರ ಮೊದಲ ಇನ್ನಿಂಗ್ಸ್ ಆಡಿದ ಭಾರತ 369 ರನ್ ಗಳಿಸಿ ಈ ಮೂಲಕ 105 ರನ್ ಗಳ ಹಿನ್ನಡೆ ಅನುಭವಿಸಿತು.
2ನೇ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 234 ರನ್ ಗಳಿಗೆ ಆಲ್ ಔಟ್ ಆಗುವ ಮೂಲಕ 339 ರನ್ ಗುರಿಯನ್ನ ನೀಡಿತು. ಈ ಗುರಿಯನ್ನ ಬೆನ್ನಟ್ಟಿದ ಭಾರತ ತಂಡ 155 ರನ್ ಗಳಿಗೆ ಆಲ್ ಔಟ್ ಆಗಿ 184 ರನ್ ಗಳಿಂದ ಸೋಲನುಭವಿಸಿದೆ.
Key words: Border-Gavaskar, series, Lose, India, 4th Test match