ಬೆಂಗಳೂರು, ಅಕ್ಟೋಬರ್,12,2023(www.justkannada.in): ರಾಜ್ಯದಲ್ಲಿ ವಿದ್ಯುತ್ ಕೊರತೆ ಹಾಗೂ ಲೋಡ್ ಶೆಡ್ಡಿಂಗ್ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಬರಗಾಲ ಹಿನ್ನಲೆ ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಹೀಗಾಗಿ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ ಎಂದಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಬರಗಾಲ ಇರುವುದರಿಂದ ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಉತ್ಪಾದನೆ ಕಡಿಮೆ ಇರುವುದರಿಂದ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ .10,000 ಎಕರೆಯಲ್ಲಿ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಪ್ಲ್ಯಾನ್ ಇದೆ. ಈಗಾಗಲೇ ಇಂಧನ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಸೆಂಟ್ರಲ್ ಗ್ರಿಡ್ನಿಂದ ವಿದ್ಯುತ್ ಕೊಟ್ಟರೇ ನಮಗೆ ಅನುಕೂಲ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.
ಲೋಡ್ ಶೆಡ್ಡಿಂಗ್ ಬಗ್ಗೆ ಬಿಜೆಪಿ ನಾಯಕರ ಟೀಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮಳೆ ಸರಿಯಾಗಿ ಆಗಿದ್ದರೇ ಈ ಸಮಸ್ಯೆ ಆಗುತ್ತಿರಲಿಲ್ಲ. ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಅವರ ಕಾಲದಲ್ಲಿ ಎಷ್ಟು ಸಮಸ್ಯೆ ಆಗಿತ್ತು ಎನ್ನುವುದನ್ನು ತಿಳಿಸಲಿ ಎಂದು ಟಾಂಗ್ ನೀಡಿದರು.
Key words: low production- power- problem – DCM -DK Shivakumar.