ಗೋವಾ,ಅಕ್ಟೋಬರ್,6,2020(www.justkannada.in): ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರ ಇದೀಗ ಮತ್ತೆ ಖ್ಯಾತೆ ತೆಗೆಯಲು ಮುಂದಾಗಿದೆ.
ಹೌದು, ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಮಾಡಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲು ಗೋವಾ ಸರ್ಕಾರ ಮುಂದಾಗಿದೆ. ಈ ಬಗ್ಗೆ ನಿನ್ನೆ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದಾರೆ. ಕರ್ನಾಟಕದ ವಿರುದ್ಧ ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿರುವ ಆರೋಪ ಮಾಡಿರುವ ಗೋವಾ ಸರ್ಕಾರ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದೆ. ಎರಡು ದಿನಗಳಲ್ಲಿ ಸುಪ್ರೀಂಕೋರ್ಟ್ ಗೆ ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದಾರೆ.
ಮಹದಾಯಿ ನ್ಯಾಯಾೀಕರಣ ಮೂರು ರಾಜ್ಯಗಳಿಗೆ ನದಿ ನೀರನ್ನು ಹಂಚಿಕೆ ಮಾಡಿದೆ. ಆದರೆ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರಗಳು ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿವೆ.
Key words: Mahadai River –water- dispute-goa govrnament-karnataka-Judicial abuse -petition