ನವದೆಹಲಿ,ಡಿಸೆಂಬರ್,9,2022(www.justkannada.in): ಮಹಾರಾಷ್ಟ್ರ-ಕರ್ನಾಟಕ ನಡುವೆ ಉದ್ಭವಿಸಿರುವ ಗಡಿ ವಿವಾದದ ವಿಚಾರ ಇದೀಗ ಮತ್ತೆ ಲೋಕಸಭೆಯಲ್ಲಿ ಪ್ರಸ್ತಾಪವಾಗಿದೆ.
ಸಂಸತ್ ಅಧಿವೇಶನ ನಡೆಯುತ್ತಿದ್ದು, ಗಡಿವಿವಾದದ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಮಹಾರಾಷ್ಟ್ರ ಸಂಸದ ದೈರ್ಯ ಶೀಲ್ ಮಾನೆ, ದೇಶದಲ್ಲಿ ಸರ್ವರು ಒಂದೇ ಅಂತ ಭಾವಿಸಲಾಗಿದೆ. ಆದರೆ ಗಡಿಯಲ್ಲಿ ಶಾಂತಿ ಕದಡುವ ಸ್ಥಿತಿ ನಿರ್ಮಾಣವಾಗಿದೆ. ಗಡಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮರಾಠಿಗರಲ್ಲಿಆತಂಕ ಮನೆ ಮಾಡಿದ್ದು, ಸಿಎಂ ಬೊಮ್ಮಾಯಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಮಹಾರಾಷ್ಟ್ರ ಸಂಸದೆ ಸುಪ್ರಿಯಾ ಸುಳೆ ಲೋಕಸಭೆಯಲ್ಲಿ ಗಡಿ ವಿವಾದ ಪ್ರಸ್ತಾಪ ಮಾಡಿದ್ದರು.
Key words: Maharashtra-Karnataka –border- dispute -raised – Lok Sabha.