ಬೆಂಗಳೂರು,ಜನವರಿ,14,2021(www.justkannada.in) : ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಇಂದು ಪವಿತ್ರ ಮಕರ ಜ್ಯೋತಿ ದರ್ಶನ ಹಾಗೂ ವಿಶೇಷ ಪೂಜೆ ನೆರವೇರಲಿದೆ.
ವಿಶೇಷ ಪೂಜೆಗೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವ ಭಕ್ತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಕೇವಲ 5 ಸಾವಿರ ಭಕ್ತರಿಗೆ ಮಾತ್ರ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ದೇವಾಸ್ಥಾನ ಮಂಡಳಿ ಅಧ್ಯಕ್ಷ ಎನ್.ವಾಸು ಮಾಹಿತಿ ನೀಡಿದ್ದಾರೆ.
ಮಕರ ಜ್ಯೋತಿ ದರ್ಶನ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಜಿಲೆಯನ್ನು 13 ವಿವಿಧ ವಲಯಗಳನ್ನಾಗಿ ವಿಂಗಡಿಸುವ ಮೂಲಕ ಭಕ್ತರ ವಾಹನಗಳ ಸಂಚಾರಕ್ಕೆ ಪೊಲಿಸರು ಅನುವು ಮಾಡಿಕೊಟ್ಟಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ದೇವಾಲಯ ಸುತ್ತಮುತ್ತಲಿನಲ್ಲಿ 6 ವಿಭಾಗಗಳಲ್ಲಿ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.
key words : Makar-Jyothi-Darshan-devotees-Covid-Negative-Certificate-Compulsory