ಶೀಘ್ರದಲ್ಲಿ ಮಲೆ‌ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ಸ್ಥಳೀಯ ಶಾಸಕ ಭೇಟಿ, ಪರಿಶೀಲನೆ

ಚಾಮಗರಾಜನಗರ,ಜನವರಿ,25,2024 (www.justkannada.in):  ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಮಲೆ‌ ಮಹದೇಶ್ವರ ಬೆಟ್ಟದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಹಿನ್ನಲೆಯಲ್ಲಿ ಇಂದು ಸ್ಥಳೀಯ ಶಾಸಕ ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜನವರಿ 2  ಅಥವಾ 3 ನೇ ವಾರದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕೆ ಸಕಲ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಹನೂರು ಶಾಸಕ ಆರ್.ಮಂಜುನಾಥ್ ಸೂಚನೆ ನೀಡಿದರು.

ಇಂದು ದೇವಾಲಯಕ್ಕೆ ಭೇಟಿ ಕೊಟ್ಟು  ಪ್ರಾಧಿಕಾರದ ಕಾರ್ಯದರ್ಶಿ ಇ.ರಘು ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಮಂಜುನಾಥ್ ಮೂಲಭೂತ ವ್ಯವಸ್ಥೆ, ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದರು.

ಇದೇ ಮೊದಲ ಬಾರಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಆಡಳಿತರೂಢ ಕಾಂಗ್ರೆಸ್ ಸಚಿವರು, ಶಾಸಕರು ಎಲ್ಲರೂ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಹಿನ್ನಲೆ ಎಲ್ಲರಿಗೂ ಉತ್ತಮ ಆತಿಥ್ಯ ನೀಡಲು ಪ್ರಾಧಿಕಾರದ ವತಿಯಿಂದ ಸಕಲ ಸಿದ್ದತೆ ನಡೆಸಲಾಗುತ್ತಿದೆ.

Key words: Cabinet meeting, Male Mahadeshwara Hill, MLA, visits