ಮಾಸಿಕ ಹುಂಡಿ ಎಣಿಕೆ: ಮತ್ತೆ ಕೋಟ್ಯಾಧಿಪತಿಯಾದ ಮಾದಪ್ಪ.

ಚಾಮರಾಜನಗರ,ಮೇ,30,2024 (www.justkannada.in): ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಪ್ರಸಿದ್ಧಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಇದೀಗ ಮಾದಪ್ಪ ಮತ್ತೆ ಕೋಟ್ಯಾಧಿಪತಿಯಾಗಿದ್ದಾನೆ.

ಮಲೇಮಹದೇಶ್ವರ ಬೆಟ್ಟದಲ್ಲಿ 30 ದಿನಗಳ ಅವಧಿಯಲ್ಲಿ ಬರೋಬ್ಬರಿ 2.58 ಕೋಟಿ ರೂ. ಗೂ ಅಧಿಕ ನಗದು  ಸಂಗ್ರಹವಾಗಿದೆ. ನಗದು ಜೊತೆ 93 ಗ್ರಾಂ ಚಿನ್ನ, 3. 350 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.   ನಿನ್ನೆ ಮುಂಜಾನೆಯಿಂದ ತಡರಾತ್ರಿವರೆಗೂ ನಡೆದ ಮಲೆ ಮಹದೇಶ್ವರ ಪ್ರಾಧಿಕಾರದ ವತಿಯಿಂದ ಹುಂಡಿ ಎಣಿಕಾ ಕಾರ್ಯ ನಡೆಯಿತು. ಸುಮಾರು 200 ಕ್ಕೂ ಸಿಬ್ಬಂದಿಗಳು ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.

ತಿಂಗಳಿಂದ ತಿಂಗಳಿಗೆ ಮಾದಪ್ಪನ ಹುಂಡಿ ಹಣದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಮಾದಪ್ಪನ ಸನ್ನಿಧಿಗೆ ಭೇಟಿ ಕೊಡುವ ಭಕ್ತರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗುತ್ತಿದ್ದು, ಕಳೆದ ತಿಂಗಳ ಯುಗಾದಿ, ಅಮಾವಾಸ್ಯೆ ಪ್ರಯುಕ್ತ ಶ್ರೀ ಮಲೇಮಹದೇಶ್ವರ ಬೆಟ್ಟದ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದರು.

Key words: Male Mahadeshwara hills, Hundi, Count