ಬೆಂಗಳೂರು,ಏಪ್ರಿಲ್,29,2025 (www.justkannada.in): ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ , ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್ ದಲ್ಲಿ ನಡೆದ ಭಾರತೀಯ ಹತ್ಯೆ ವಿರುದ್ಧ ಭಾರತ ಒಂದಾಗಿ ನಿಲ್ಲಬೇಕಿದೆ. ನಾವು ಯಾವಾಗಲೂ ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ನಿಲ್ಲುತ್ತೇವೆ ಎಂದು ತೋರಿಸಿದೆ. ಇದು ನಿರ್ಣಾಯಕ ನನ್ನಿವೇಶವಾದ್ದರಿಂದ ಕೇಂದ್ರ ಸರ್ಕಾರ ಕೂಡಲೇ ವಿಶೇಷ ಉಭಯ ಸಂಸತ್ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ.
ಉಗ್ರರ ವಿರುದ್ದ ಕೈಗೊಳ್ಳುವ ಕ್ರಮಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಆದಷ್ಟು ಬೇಗ ವಿಶೇಷ ಅಧಿವೇಶನ ಕರೆಯುವಂತೆ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
Key words: Pahalgam, terror attack, Mallikarjun Kharge, PM Modi