ಮಂಡ್ಯ,ಫೆಬ್ರವರಿ,24,2025 (www.justkannada.in): ಸಾಲಭಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಬಳಿಕ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಯಲಿಯೂರು ಬಳಿ ಈ ಘಟನೆ ನಡೆದಿದೆ. ಮಾಸ್ತಪ್ಪ (65) ಪತ್ನಿ ರತ್ನಮ್ಮ (45) ಮಗಳು ಲಕ್ಷ್ಮಿ (18) ಮೃತಪಟ್ಟವರು. ಪತ್ನಿ ಮಗಳೊಂದಿಗೆ ಆತ್ಮಹತ್ಯೆಗೆ ಮಾಸ್ತಪ್ಪ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳು ಎನ್ನಲಾಗಿದೆ. ಮಾಸಪ್ಪ ಆಟೋ ಚಾಲಕರಾಗಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬರ ಮರೆತಮೃತ ದೇಹ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಮಾಸ್ತಪ್ಪ ಸುಮಾರು 3 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಸಾಲಕೊಟ್ಟವರು ಇಂದು ಮನೆ ಬಳಿ ಗಲಾಟೆ ಮಾಡಿದ್ದಕ್ಕೆ ನೊಂದಿದ್ದರು. ಮರ್ಯಾದೆಗೆ ಅಂಜಿ ಮಗಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Key words: Three members, family, commit suicide, Mandya