ಮಂಡ್ಯ,ಅಕ್ಟೋಬರ್,17,2022(www.justkannada.in): ಪರಿಸರ ಪ್ರೇಮಿ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಆಧುನಿಕ ಭಗೀರಥ ಖ್ಯಾತಿಯ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯ ಕೆರೆ ಕಾಮೇಗೌಡ (84) ನಿಧನರಾಗಿದ್ದಾರೆ.
ಕಾಮೇಗೌಡ ಅವರು ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು.
ಇವರ ನಿಧನಕ್ಕೆ ಟ್ವಿಟ್ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು15 ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಶ್ರೀ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ ಎಂದಿದ್ದಾರೆ.
Key words: mandya-Kamegowda – passes away-CM Bommai -condoles.